Thursday, April 7, 2016

ಮಾನವ ಮೂಳೆ ಮಾಂಸದ ತಡಿಕೆ

ಮಾನವ ದೇಹವು ಮೂಳೆ ಮಾಂಸದ ತಡಿಕೆ
ಮಾನವ ಮೂಳೆ ಮಾಂಸದ ತಡಿಕೆ
ಇದರ ಮೇಲಿದೆ ತೊದಲಿನ ಹೊದಿಕೆ
ತುಂಬಿದೆ ಒಳಗೆ ಕಾಮಾದಿ ಬಯಕೆ

ಮಾನವ ಮೂಳೆ ಮಾಂಸದ ತಡಿಕೆ

ನವ ಮಾಸಗಳು ಹೊಲಸಲಿ ಕಳೆದು
ನವ ರಂಧ್ರಗಳಾ ತಳೆದು ಬೆಳೆದು
ಬಂದಿದೆ ಬುವಿಗೆ ಈ ನರ ಬೊಂಬೆ
ನಂಬಲು ಏನಿದೆ ಸೌಭಾಗ್ಯವೆಂದೆ



ಮಾನವ ಮೂಳೆ ಮಾಂಸದ ತಡಿಕೆ
ದೇಹವು ಮೂಳೆ ಮಾಂಸದ ತಡಿಕೆ



ಉಸಿರಾಡುವ ತನಕ ನಾನು ನನದೆಂಬ ಮಮಕಾರ
ನಿಂತ ಮರುಘಳಿಗೆ ಮಸಣದೆ ಸಂಸ್ಕಾರ
ಮಣ್ಣಲಿ ಬೆರೆತು ಮೆಲ್ಲಗೆ ಕೊಳೆತು
ಮುಗಿಯುವ ದೇಹಕೆ ವ್ಯಾಮೋಹವೇಕೆ

ಮಾನವ ಮೂಳೆ ಮಾಂಸದ ತಡಿಕೆ
ದೇಹವು ಮೂಳೆ ಮಾಂಸದ ತಡಿಕೆ

ಬರುವಾಗ ಬೆತ್ತಲೆ ಹೋಗುವಾಗ ಬೆತ್ತಲೆ
ಬಂದು ಹೋಗುವ ನಡುವೆ ಬರಿ ಕತ್ತಲೆ

ಭಕ್ತಿಯ ಬೆಳಕು ಬಾಳಿಗೆ ಬೇಕು
ಮುಕ್ತಿಗೆ ವಿಠಲನ ಕೊಂಡಾಡಬೇಕು

ಮಾನವ ಮೂಳೆ ಮಾಂಸದ ತಡಿಕೆ
ದೇಹವು ಮೂಳೆ ಮಾಂಸದ ತಡಿಕೆ

No comments:

Post a Comment