Thursday, April 7, 2016

ದೋಣಿ ಸಾಗಲಿ, ಮುಂದೆ ಹೋಗಲಿ


ಶೀರ್ಷಿಕೆ : ದೋಣಿ ಸಾಗಲಿ, ಮುಂದೆ ಹೋಗಲಿ
ಕವಿ : ಕುವೆಂಪು
ಪ್ರಾಕಾರ : ಭಾವಗೀತೆ
ಭಾಷೆ : ಕನ್ನಡ

ದೋಣಿ ಸಾಗಲಿ, ಮುಂದೆ ಹೋಗಲಿ, ದೂರ ತೀರವ ಸೇರಲಿ
ಬೀಸು ಗಾಳಿಗೆ ಬೀಳು ತೆಳುವ ತೆರೆಯ ಮೇಗಡೆ ಹಾರಲಿ

ಹೊನ್ನಗಿಂಡಿಯ ಹಿಡಿದು ಕೈಯೊಳು ಹೇಮವಾರಿಯ ಚಿಮುಕಿಸಿ
ಮೇಘಮಾಲೆಗೆ ಬಣ್ಣವೀಯುತ ಯಕ್ಷಲೋಕವ ವಿರಚಿಸಿ
ನೋಡಿ ಮೂಡಣದಾ ದಿಗಂತದಿ ಮೂಡುವೆಣ್ಣಿನ ಮೈಸಿರಿ
ರಂಜಿಸುತ್ತಿದೆ ಚೆಲುವೆಯಾಕೆಗೆ ಸುಪ್ರಭಾತವ ಬಯಸಿರಿ    ||ದೋಣಿ ಸಾಗಲಿ||

ಕೆರೆಯ ಅಂಚಿನ ಮೇಲೆ ಮಿಂಚಿನ ಹನಿಗಳಂದದಿ ಹಿಮಮಣಿ
ಮಿಂಚುತಿರ್ಪುವು ಮೂಡುತೈತರೆ ಬಾಲಕೊಮಲ ದಿನಮಣಿ
ಹಸಿರು ಜೋಳದ ಹೊಲದ ಗಾಳಿಯ ತೀಡಿ ತಣ್ಣಗೆ ಬರುತಿದೆ
ಹುದುಗಿ ಹಾಡುವ ಮತ್ತಕೋಕಿಲ ಮಧುರವಾಣಿಯ ತರುತಿದೆ    ||ದೋಣಿ ಸಾಗಲಿ||

ದೂರ ಬೆಟ್ಟದ ಮೇಲೆ ತೇಲುವ ಬಿಳಿಯ ಮೋಡವ ನೋಡಿರಿ
ಅದನೆ ಹೋಲುತ, ಅಂತೆ ತೇಲುತ ದೋಣಿಆಟವನಾಡಿ
ರಿ
ನಾವು ಲೀಲಾಮಾತ್ರ ಜೀವರು ನಮ್ಮ ಜೀವನ ಲೀಲೆಗೆ
ನಿನ್ನೆ ನಿನ್ನೆಗೆ, ಇಂದು ಇಂದಿಗೆ, ಇರಲಿ ನಾಳೆಯು ನಾಳೆಗೆ    ||ದೋಣಿ ಸಾಗಲಿ||

No comments:

Post a Comment